ಖಾತೆ ಹಂಚಿಕೆ ಪಟ್ಟಿ ಅಂತಿಮ, ಇಂದೇ ರಾಜ್ಯಪಾಲರಿಗೆ ರವಾನೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಆಗಸ್ಟ್ 25, 2019 (www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಸಚಿವ ಸಂಪುಟದ  ಖಾತೆ ಹಂಚಿಕೆ ಪಟ್ಟಿ ಅಂತಿಮಗೊಂಡಿದ್ದು, ಇಂದು ರಾಜ್ಯಪಾಲರಿಗೆ ಸಲ್ಲಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಶನಿವಾರವೇ ಪಟ್ಟಿ ಸಿದ್ಧವಾಗಿದೆ. ಆದರೆ ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿಯವರ ನಿಧನದ ಕಾರಣ ಅದನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಖಾತೆ ಹಂಚಿಕೆ ಕುರಿತಂತೆ ಅಮಿತ್ ಶಾ ಅವರೊಂದಿಗೆ ಚರ್ಚಿಸಿದ್ದೇವೆ ಮತ್ತು ಹೆಸರುಗಳನ್ನು ಅಂತಿಮಗೊಳಿಸಿದ್ದೇವೆ ಎಂದು ಬಿಎಸ್ವೈ ಮಾಹಿತಿ ನೀಡಿದ್ದಾರೆ.