Sunday, September 13, 2026

BDA Apartments

RCB ವಿರುದ್ದ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್...
Home Front Page RCB ವಿರುದ್ದ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್ ನಲ್ಲಿ ನಿರ್ಧಾರ

RCB ವಿರುದ್ದ ಕ್ರಿಮಿನಲ್ ಕೇಸ್, ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್ ನಲ್ಲಿ ನಿರ್ಧಾರ

ಬೆಂಗಳೂರು, ಜುಲೈ, 24,2025 (www.justkannada.in): ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಸಿಬಿ, ಇವೆಂಟ್ ಮ್ಯಾನೇಜ್​ ಮೆಂಟ್ ಕಂಪನಿ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಾಲ್ತುಳಿತ ಘಟನೆ ಸಂಬಂಧ ನ್ಯಾಯಮೂರ್ತಿ ಡಿ. ಮೈಕಲ್ ಕುನ್ಹಾ ಏಕ ಸದಸ್ಯ ಆಯೋಗ ಸಲ್ಲಿಸಿದ್ದ ವರದಿ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ಆರ್​ಸಿಬಿ, ಡಿಎನ್ ಎ, ಕೆಎಸ್ ಸಿಎ ವಿರುದ್ದ ಕ್ರಿಮಿನಲ್ ಕೇಸ್ ದಾಖಲು ಹಾಗೂ  ಪೊಲೀಸರ ವಿರುದ್ಧ ಇಲಾಖಾ ತನಿಖೆ ನಡೆಸಲು ನಿರ್ಣಯ ಕೈಗೊಳ್ಳಲಾಗಿದೆ.RCB ವಿರುದ್ದ ಕ್ರಿಮಿನಲ್ ಕೇಸ್ bangalore

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ರಘುರಾಮ್ ಭಟ್, ಮಾಜಿ ಕಾರ್ಯದರ್ಶಿ ಎ.ಶಂಕರ್, ಮಾಜಿ ಖಜಾಂಚಿ ಜಯರಾಂ, ಆರ್​​ಸಿಬಿ ತಂಡದ ರಾಜೇಶ್ ಮೆನನ್, ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್​​ ಎಂಡಿ ವೆಂಕಟ್ ವರ್ಧನ್ , ಡಿಎನ್​ಎ ನೆಟ್​ವರ್ಕ್​ ಲಿಮಿಟೆಡ್ ಉಪಾಧ್ಯಕ್ಷ ಸುನೀಲ್ ಮಾಥೂರ್ ಇವರಿಗೆ  ಇದೀಗ ಸಂಕಷ್ಟ ಎದುರಾಗಲಿದೆ.vtu

Key words: Cabinet, file, criminal case, against, RCB