ಸಂಪುಟ ರಚನೆ ಕಸರತ್ತು: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಭೇಟಿಯಾದ ಸಿಎಂ ಬಸವರಾಜ ಬೊಮ್ಮಾಯಿ.

ನವದೆಹಲಿ,ಆಗಸ್ಟ್,2,2021(www.justkannada.in):  ರಾಜ್ಯ ಸಚಿವ ಸಂಪುಟ ರಚನೆಯ ಕಸರತ್ತು ಮುಂದುವರೆದಿದ್ದು ಈ ಬಗ್ಗೆ ಕೇಂದ್ರ ನಾಯಕರ ಜತೆ ಚರ್ಚಿಸಿ ನೂತನ ಸಚಿವರ ಪಟ್ಟಿ ಅಂತಿಮಗೊಳಿಸಲು ದೆಹಲಿಗೆ ತೆರಳಿವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನ ಭೇಟಿಯಾಗಿದ್ದಾರೆ.

ಸಂಸತ್ ಭವನದ ಕಚೇರಿಯಲ್ಲಿ ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಚರ್ಚೆ ನಡೆಸಿದ್ದು ಈ ವೇಳೆ ಸಂಸದ ಶಿವಕುಮಾರ್ ಉದಾಸಿ, ಎಸ್.ಮುನಿಸ್ವಾಮಿ, ಶಾಸಕ ರಾಜುಗೌಡ ಉಪಸ್ಥಿತರಿದ್ದರು.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನ ಭೇಟಿಯಾಗುವ ಮುನ್ನ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಸ್ ಸಂತೋಷ್ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು. ಇನ್ನು ಇಂದು ಸಂಜೆ ದೆಹಲಿಯಲ್ಲಿ ಪಕ್ಷದ ಸಭೆ ನಡೆಯಲಿದೆ.  ಸಭೆಯಲ್ಲಿ ಸಚಿವ ಸಂಪುಟ ರಚನೆ ಬಗ್ಗೆ ಚರ್ಚಿಸಲಾಗುತ್ತದೆ. ಬಳಿಕ ಸಂಪುಟ ರಚನೆಯ ಅಂತಿಮ ಚಿತ್ರಣ ಸಿಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದರು. ಹಾಗೆಯೇ ಕೇಂದ್ರ ಸಚಿವ ಅಮಿತ್ ಶಾ ಭೇಟಿಯಾಗುವುದಾಗಿಯೂ ತಿಳಿಸಿದ್ದಾರೆ.

Key words: cabinet  structure -CM Basavaraja Bommai- meets -Dharmendra Pradhan-Union Minister