Tuesday, September 29, 2026

BDA Apartments

ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟಿದ್ದಕ್ಕೆ ಕಾರಣ ತಿಳಿಸಿದ ಬಿಜೆಪಿ ರಾಜ್ಯಾ...
Home Front Page ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟಿದ್ದಕ್ಕೆ ಕಾರಣ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟಿದ್ದಕ್ಕೆ ಕಾರಣ ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

ಬೆಂಗಳೂರು,ಜುಲೈ24,2021(www.justkannada.in):  ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು 29 ಮಂದಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಸಂಪುಟದಲ್ಲಿ ಹಿರಿಯರನ್ನ ಕೈಬಿಟ್ಟಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಾರಣ ನೀಡಿದ್ದಾರೆ.

ಈ ಕುರಿತು ಮಾತನಾಡಿರು ಅವರು, ಹಿರಿಯರನ್ನ ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಲು ತೀರ್ಮಾನ ಮಾಡಲಾಗಿದೆ. ಮುಂದಿನ ಚುನಾವಣೆ ದೃಷ್ಠಿಯಿಂದ ಈ ನಿರ್ಧಾರ ಮಾಡಲಾಗಿದೆ. ಹೀಗಾಗಿ ಕೆಲ ಹಿರಿಯರನ್ನ ಸಂಪುಟದಿಂದ ಕೈಬಿಡಲಾಗಿದೆ ಎಂದರು.

ಇನ್ನು ಸಚಿವ ಸ್ಥಾನ ಸಿಗದ ಶಾಸಕರ ಅಸಮಾಧಾನ ಕುರಿತು ಪ್ರತಿಕ್ರಿಯಿಸಿರುವ ನಳೀನ್ ಕುಮಾರ್ ಕಟೀಲ್, ಸಚಿವ ಸ್ಥಾನ ಸಿಗದವರಿಗೆ ಅಸಮಾಧಾನ ಇರುತ್ತೆ. ಯಾವ ಶಾಸಕರು ರಾಜೀನಾಮೆ ಕೊಡುವುದಿಲ್ಲ. ಅವರನ್ನ ಕರೆಸಿ ಸಮಾಧಾನ ಮಾಡುವ ಕೆಲಸ ಮಾಡುತ್ತೇನೆ ಎಂದರು.

Key words: cabinet-structure-CM-Basavaraja bommai-seniors-bjp-state president-nalin kumar katil