ಬಾಂಬ್ ಇರಿಸಿರುವುದಾಗಿ ಕರೆ: ಮುಂಬೈ ರೈಲ್ವೆ ನಿಲ್ದಾಣಗಳು, ಅಮಿತಾಬ್ ಮನೆ ಬಳಿ ಹೆಚ್ಚಿನ ಭದ್ರತೆ

ಬೆಂಗಳೂರು, ಆಗಸ್ಟ್ 07, 2021 (www.justkannada.in): ಮುಂಬೈನ ರೈಲ್ವೆ ನಿಲ್ದಾಣಗಳು ಮತ್ತು ಅಮಿತಾಬ್ ಬಚ್ಚನ್ ಬಂಗಲೆಯಲ್ಲಿ ಬಾಂಬ್ ಇರಿಸಿರುವುದಾಗಿ ಅನಾಧೇಯ ಕರೆ ಬಂದಿದೆ.

ಪೊಲೀಸರಿಗೆ ಅನಾಮಧೇಯ ಕರೆ ಬಂದ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಆದರೆ ಇಲ್ಲಿಯವರೆಗೆ ಶೋಧದ ಸಮಯದಲ್ಲಿ ಅನುಮಾನಾಸ್ಪದವಾಗಿ ಏನೂ ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಶುಕ್ರವಾರ ರಾತ್ರಿ ಕರೆ ಬಂದಿದ್ದು, ಅದರಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್ ಎಂಟಿ), ಬೈಕುಲ್ಲಾ, ದಾದರ್ ರೈಲ್ವೆ ನಿಲ್ದಾಣಗಳು ಮತ್ತು ಜುಹುನಲ್ಲಿರುವ ನಟ ಅಮಿತಾಬ್ ಬಚ್ಚನ್ ಅವರ ಬಂಗಲೆಯಲ್ಲಿ ಬಾಂಬ್ ಗಳನ್ನು ಇರಿಸಲಾಗಿದೆ ಎಂದು ಕರೆ ಮಾಡಿದ್ದ ವ್ಯಕ್ತಿ ತಿಳಿಸಿದ್ದ ಎನ್ನಲಾಗಿದೆ.