Tuesday, August 4, 2026

BDA Apartments

Home Front Page ಕೃಷಿ ತಿದ್ದುಪಡಿ ಕಾಯ್ದೆಗಳ ಹಿಂಪಡೆದ ವಿಚಾರ: ಪ್ರತಿಕ್ರಿಯಿಸಲು ಕೇಂಧ್ರ ಸಚಿವೆ ಶೋಭಾ ಕರಂದ್ಲಾಜೆ ನಕಾರ.

ಕೃಷಿ ತಿದ್ದುಪಡಿ ಕಾಯ್ದೆಗಳ ಹಿಂಪಡೆದ ವಿಚಾರ: ಪ್ರತಿಕ್ರಿಯಿಸಲು ಕೇಂಧ್ರ ಸಚಿವೆ ಶೋಭಾ ಕರಂದ್ಲಾಜೆ ನಕಾರ.

ಮೈಸೂರು,ನವೆಂಬರ್,20,2021(www.justkannada.in): ರೈತರ ಹೋರಾಟಕ್ಕೆ ಮಣಿದು ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಹಿಂಪಡೆಯುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಲು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನಿರಾಕರಿಸಿದ್ದಾರೆ.

ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ,  ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನ ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದರು. ಈ ನಿರ್ಧಾರದ ಬಗ್ಗೆ ವಿಪಕ್ಷನಾಯಕರು, ಕೇಂದ್ರಸಚಿವರು, ಹಲವು ರಾಜಕೀಯ ನಾಯಕರು ರೈತ ಸಂಘಟನೆಗಳು ಸ್ವಾಗತಿಸಿವೆ.Corona Vaccine -Free- mysore-MP-Shobha Karandlaje,

ಈ ಮಧ್ಯೆ ಕೃಷಿ ತಿದ್ದುಪಡಿ ಕಾಯ್ದೆ ರದ್ದು  ಕುರಿತು ಮೈಸೂರಿನಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಮಾತನಾಡುವುದಿಲ್ಲ ಎಂದು ಸನ್ನೆ ಮಾಡಿ ಹೊರಟರು.

Key words: cancel-Agricultural Amendment Act-union Minister- Shobha Karandlaje – not respond.