ಸಭೆ ರದ್ದು :  ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಮಂಗಳೂರಿಗೆ.

 

ಬೆಂಗಳೂರು,ಜುಲೈ,22,2021(www.justkannada.in): ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.jk

ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ತೆರಳಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.

ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕಾಂಗ್ರೆಸ್‌ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ಅವರ  ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Key words: Cancel – meeting- DK shivakumar- Oscar Fernandes -health Shivakumar to Mangalore.