Friday, August 7, 2026

BDA Apartments

Home Front Page ಬಿಜೆಪಿ ಕೋರ್ ಕಮಿಟಿ ಸಭೆ ನಂತರ ನಡೆಯಬೇಕಿದ್ದ ಸುದ್ದಿಗೋಷ್ಠಿ ರದ್ದು…

ಬಿಜೆಪಿ ಕೋರ್ ಕಮಿಟಿ ಸಭೆ ನಂತರ ನಡೆಯಬೇಕಿದ್ದ ಸುದ್ದಿಗೋಷ್ಠಿ ರದ್ದು…

ಬೆಂಗಳೂರು,ಜೂ,6,2020(www.justkannada.in): ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆ ಹಿನ್ನಲೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು ಸಭೆಯಲ್ಲಿ ರಾಜ್ಯಸಭೆ ಮತ್ತು ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ಈ ನಡುವೆ ಸಭೆ ಬಳಿಕ ನಡೆಸಬೇಕಿದ್ದ ಸುದ್ದಿಗೋಷ್ಠಿಯನ್ನ ಬಿಜೆಪಿ ನಾಯಕರು ರದ್ಧುಗೊಳಿಸಿದ್ದಾರೆ.cancellation-press-meet-bjp-core-committee-meeting

ಪ್ರತಿ ಸಲ ಸಭೆ ನಡೆಸಿದ ನಂತರ ಬಿಜೆಪಿ ನಾಯಕರು ಸುದ್ಧಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತಿದ್ದರು. ಆದರೆ ಇದೀಗ ಕೊರೋನಾ ನೆಪ ಹೇಳಿ ಬಿಜೆಪಿ ಕೋರ್ ಕಮಿಟಿ ಸಭೆ ನಂತರದ ಸುದ್ದಿಗೋಷ್ಠಿಯನ್ನ ರದ್ಧುಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Cancellation –press meet – BJP core committee- meeting