ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಂದು ಸುತ್ತಿನ ಸಮೀಕ್ಷೆ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು, ಫೆಬ್ರವರಿ 14,2024(www.justkannada.in): ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ  ಇಂದು ನಗರದ ಖಾಸಗಿ ಹೋಟೆಲ್​​ನಲ್ಲಿ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ  ನಡೆಯಿತು. ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸೇರಿ ಹಲವರು ಪಾಲ್ಗೊಂಡಿದ್ದರು.

ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್​, ಕಾರ್ಯಕರ್ತರು ಕೊಟ್ಟ ಅಭಿಪ್ರಾಯದ ಬಗ್ಗೆ ಚರ್ಚೆ ಆಗಿದೆ. ಜಿಲ್ಲಾ ವೀಕ್ಷಕರು, ಸಚಿವರು, ಕಾರ್ಯಕರ್ತರ ಅಭಿಪ್ರಾಯದ ಬಗ್ಗೆ ಚರ್ಚೆ ಆಗಿದೆ. ಸಮೀಕ್ಷೆ ವರದಿ ಬಗ್ಗೆ ವಿಮರ್ಶೆ ಮಾಡಿದ್ದೇವೆ. ಮತ್ತೊಂದು ಸುತ್ತಿನ ಸಮೀಕ್ಷೆ ಮಾಡಿ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ ಎಂದರು.

ಕಾರ್ಯಕರ್ತರು, ಸಮೀಕ್ಷಾ ತಂಡಗಳು, ವೀಕ್ಷಕರು ನೀಡಿರುವ ಟಿಕೆಟ್ ಆಕಾಂಕ್ಷಿಗಳ ಹೆಸರುಗಳನ್ನ ಚರ್ಚೆ ಮಾಡಿದ್ದೇವೆ. ಇನ್ನೂ ಸಹ ಯಾವುದೇ ಕ್ಷೇತ್ರದ ಟಿಕೆಟ್ ಅಂತಿಮವಾಗಿಲ್ಲ. ರಾಜಕೀಯದಲ್ಲಿ ಯಾರು ಬೇಕಾದ್ರೂ ಸ್ಪರ್ಧೆ ಮಾಡಬಹುದು. ಎಲ್ಲರಿಗೂ ಒಂದು ಅವಕಾಶ ಇರಲಿದೆ. ಚುನಾವಣೆಯಲ್ಲಿ ಯಾರು ಗೆಲ್ತಾರೆ ಎನ್ನುವುದು ಪಕ್ಷಕ್ಕೆ ಮುಖ್ಯ. ಸಚಿವರು ಕೊಟ್ಟ ಪಟ್ಟಿಯನ್ನು ಮುಖ್ಯಮಂತ್ರಿಗೆ ಕೊಡಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

Key words: candidate -selection – Lok Sabha -elections – DCM- DK Shivakumar.