Thursday, August 13, 2026

BDA Apartments

Home Front Page ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರ: ಮೂವರ ಹೆಸರು ಶಿಫಾರಸ್ಸು- ಗೃಹ ಸಚಿವ ಬಸವರಾಜ ಬೊಮ್ಮಾಯಿ...

ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ಆಯ್ಕೆ ವಿಚಾರ: ಮೂವರ ಹೆಸರು ಶಿಫಾರಸ್ಸು- ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ…

ಹಾಸನ,ಜೂ,8,2020(www.justkannada.in):  ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೂವರ ಹೆಸರನ್ನ ಹೈಕಮಾಂಡ್ ಗೆ ಶಿಫಾರಸ್ಸು ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.candidate-selection-rajya-sabha-elections-home-minister-basavaraja-bommai

ಹಾಸನದಲ್ಲಿ ಇಂದು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗೆ ಮೂವರು ಹೆಸರನ್ನ ಹೈಕಮಾಂಡ್ ಗೆ ಕಳುಹಿಸಿದ್ದೇವೆ.  ಹೆಸರು ಅಂತಿಮಗೊಳಿಸಿದ ಬಳಿಕ ನಾಮಪತ್ರ ಸಲ್ಲಿಕೆ ಮಾಡಲಾಗುತ್ತದೆ.  ಹಲವರ ಹೆಸರು ಬರೋದು ಸಹಜ.  ಆದರೇ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಪಕ್ಷದಲ್ಲಿ ಭಿನ್ನಮತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಬಸವರಾಜ ಬೊಮ್ಮಾಯಿ, ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಇನ್ನು ರಾಜ್ಯಸಭೆಗೆ ಹೆಚ್.ಡಿ ದೇವೇಗೌಡರ ಸ್ಪರ್ಧೆ ಅವರು ಅವರ ಪಕ್ಷದ ವಿಚಾರ. ಈ ಬಗ್ಗೆ ನಾನು ಮಾತನಾಡಲ್ಲ ಎಂದು ಸಚಿವ  ಬಸವರಾಜ ಬೊಮ್ಮಯಿ ತಿಳಿಸಿದರು.

Key words:  Candidate -Selection – Rajya Sabha- Elections-Home Minister -Basavaraja Bommai