2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಫೈನಲ್- ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ.

ಶಿವಮೊಗ್ಗ,ಮಾರ್ಚ್,4,2024(www.justkannada.in): ಲೋಕಸಭೆ ಚುನಾವಣೆಗೆ ಈಗಾಗಲೇ ಮೊದಲ ಹಂತದಲ್ಲಿ 195 ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಕರ್ನಾಟಕ ಅಭ್ಯರ್ಥಿಗಳ ಘೋಷಣೆ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, 2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಫೈನಲ್ ಆಗಲಿದೆ ಎಂದಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಭೆಯಲ್ಲಿ ಭಾಗವಹಿಸುಲು ದೆಹಲಿಗೆ ಹೋಗುತ್ತಿದ್ದೇನೆ.  2ನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಅಂತಿಮವಾಗಬಹುದು.  ರಾಜ್ಯದ 28 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಹೆಸರು ಫೈನಲ್ ಆಗಬಹುದು ಎಂದರು.

ಎಂಪಿ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ನೀಡುವ ವಿಚಾರ, ದೆಹಲಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಿಶ್ಷಿತ. ಆದರೆ ಸೀಟು ಹಂಚಿಕೆಯಾಗಿಲ್ಲ ಎಂದು ಬಿಎಸ್ ವೈ ತಿಳಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಅಭಿಯಾನ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ,  ಒಳ್ಳೆಯ ಕೆಲಸ ಮಾಡುವುದನ್ನ ಸಹಿಸದೇ ಈ ರೀತಿ ಮಾಡಿದ್ದಾರೆ. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.

Key words: Candidates -Karnataka – 2nd list – Former CM- BS Yeddyurappa.