ಯಾವುದೇ ಹೇಳಿಕೆಗಳಿಂದ ನಾಯಕರಾಗಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ ಟಾಂಗ್.

ಶಿವಮೊಗ್ಗ,ಆಗಸ್ಟ್,16,2021(www.justkannada.in):  ವಾಜಿಪೇಯಿ ಬಗ್ಗೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ, ಯಾವುದೇ ಹೇಳಿಕೆಗಳಿಂದ ನಾಯಕರಾಗಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ, ಎಲುಬಿಲ್ಲದ ನಾಲಿಗೆ ಈ ರೀತಿ ಮಾತನಾಡಿಸುತ್ತದೆ. ಹೇಳಿಕೆಗಳನ್ನು ಕೊಡುವುದರ ಮೂಲಕ ನಾಯಕತ್ವ ಬೆಳೆದುಬಿಡುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ವಾಜಪೇಯಿಯಂತಹ ನಾಯಕರ ಬಗ್ಗೆ ಮಾತನಾಡುವುದು, ಯಾವುದೇ ಪಕ್ಷದವರಿಗೆ ಶೋಭೆ ತರುವುದಿಲ್ಲ ಎಂದರು.

ಇಂದಿರಾ ಕ್ಯಾಂಟಿನ್ ಹೆಸರು  ಬದಲಾವಣೆ  ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಿ.ಟಿ ರವಿ ಅವರು ರಾಜ್ಯಮಟ್ಟದಲ್ಲಿ ಹೇಳಿಕೆ ನೀಡಿದ್ದಾರೆ. ಈ ಚರ್ಚೆ ಎಲ್ಲಿಯವರೆಗೆ ಹೋಗುತ್ತೆ ನೋಡಬೇಕು ಎಂದರು

ಬಿಎಸ್ ಯಡಿಯೂರಪ್ಪ ಸಿಎಂ ಆಗಲು ಹೋರಾಟ ಮಾಡಿಲ್ಲ.ನಾನು ಯಾವುದೇ ಸ್ಥಾನಮಾನಕ್ಕೆ ಹೋರಾಟ ಮಾಡಿಲ್ಲ. ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು, ಮಂತ್ರಿಯಾಗಬೇಕು, ಮುಖ್ಯಮಂತ್ರಿಯಾಗಬೇಕೆಂ ಉದ್ದೇಶವಿಟ್ಟುಕೊಂಡು ಹೋರಾಟ ಮಾಡಲಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ಯಾವುದೇ ಪ್ರಾದೇಶಿಕ ಪಕ್ಷವಲ್ಲ. ರಾಜ್ಯ ನಾಯಕರು, ರಾಷ್ಟ್ರೀಯ ನಾಯಕರು ಇದ್ದಾರೆ. ಯಾವಾಗ ಯಾವ ಸ್ಥಾನಮಾನ ಕೊಡಬೇಕು ಎಂಬುದನ್ನ ಪಕ್ಷದ ಮುಖಂಡರು ತೀರ್ಮಾನ ಮಾಡುತ್ತಾರೆ ಎಂದು ವಿಜಯೇಂದ್ರ ಹೇಳಿದರು.

ರಾಜ್ಯದ ಉಪಾಧ್ಯಕ್ಷನಾಗಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಬೇಕಾಗುತ್ತದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷರಾದ ನಡ್ಡಾ ಅವರಿಗೆ ಹಳೆ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕು ಎಂಬ ಅಪೇಕ್ಷೆ ಅವರಿಗೆ ಇದೆ. ಕೆ.ಆರ್.ಪೇಟೆ, ಶಿರಾ ಉಪ ಚುನಾವಣೆ ಸಂದರ್ಭದಲ್ಲಿ ಅಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡಿದ್ದೆ. ಆ ಭಾಗದಲ್ಲಿ ಪಕ್ಷವನ್ನು ಇನ್ನು ಗಟ್ಟಿಗೊಳಿಸಲು ಅವಕಾಶ ಇದೆ ಎಂದರು.

ಯಾವುದೇ ವಿಧಾನಸಭೆ ಚುನಾವಣೆ ನಡೆದ ಸಂದರ್ಭದಲ್ಲಿ ಬಿಜೆಪಿ 104, 110 ಸ್ಥಾನಕ್ಕೆ ಬಂದು ನಿಂತಿತ್ತು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು ಹಳೆ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ಕೊಡಬೇಕಿದೆ. ಹೀಗಾಗಿಯೇ ಆ ಭಾಗದಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದೇನೆ ಎಂದು ವಿಜಯೇಂದ್ರ ತಿಳಿಸಿದರು.

ENGLISH SUMMARY…

Nobody can become leaders by giving statements: B. Y. Vijendra
Shivamogga, August 16, 2021 (www.justkannada.in): In his reaction to the former Minister C.T. Ravi and Congress leader Priyank Kharge’s statement and counter-statements the BJP State Vice-President B.Y. Vijendra expressed his view that nobody can become leaders by giving statements.
Replying to Congress leader Priyank Kharge’s statement at Shivamogga today, Vijendra opined that a tongue has no bones, and hence people lose talk. But they might think that they will grow as leaders by giving such statements. Speaking against former Prime Minister Atal Bihari Vajpayee is not correct for people of any party.
In his reaction to change the name of Indira Canteen he said, “C.T. Ravi has spoken at the State-level. “Let us see where it reaches,” he added.
Keywords: B.Y. Vijendra/ BJP State Vice-President/ statements/ C.T. Ravi/ Priyank Kharge

Key words:  cannot – leader – any statement-BJP-  BY Vijayendra -Tong.