ಪಕ್ಷದೊಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ, ಇದಕ್ಕಾಗಿ ರಾಜೀನಾಮೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಕಾಂಗ್ರೆಸ್ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿಂದಿನ ಕಾರಣವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ.

ಪಕ್ಷದ ಒಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಅಸಾಧ್ಯ, ಇದೇ ಕಾರಣಕ್ಕೆ ನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

ಉಪಚುನಾವಣೆಯ ಸೋಲಿನ ಬಳಿಕ ತಮ್ಮ ಆಪ್ತರ ಬಳಿ ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ನನ್ನ ಹೋರಾಟ ಬಿಜೆಪಿ ಪಕ್ಷದ ವಿರುದ್ಧ ಮಾತ್ರ. ಆದರೆ, ನಮ್ಮ ಪಕ್ಷದ ಒಳಗಿನ ಹಿತಶತ್ರುಗಳ ವಿರುದ್ಧ ಹೋರಾಟ ಮಾಡಲು ಸಾಧ್ಯವೇ ಇಲ್ಲ ಹೀಗಾಗಿ ನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜೀನಾಮೆಯನ್ನು ಹಿಂಪಡೆಯುವ ಮನಸ್ಸಿಲ್ಲ ಎಂದಿದ್ದಾರೆ.