Tuesday, September 22, 2026

BDA Apartments

Home Front Page ನಿರೀಕ್ಷೆಗೂ ಮೀರಿ ಬಂಡವಾಳ ಹೂಡಿಕೆಯಾಗಿದೆ:  ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ.

ನಿರೀಕ್ಷೆಗೂ ಮೀರಿ ಬಂಡವಾಳ ಹೂಡಿಕೆಯಾಗಿದೆ:  ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ.

ಬೆಂಗಳೂರು,ನವೆಂಬರ್,4,2022(www.justkannada.in):  ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಬಂಡವಾಳ ಹೂಡಿಕೆಯಾಗಿದೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆಯ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ನಿರೀಕ್ಷೆಗಿಂತ ದುಪ್ಪಟ್ಟು ಬಂಡವಾಳ ಹೂಡಿಕೆಯಾಗಿದೆ. 10 ಸಾವಿರ ಕೋಟಿ ಬಂಡವಾಳ ಹೂಡಿಕೆಯಾಗಲಿದೆ. 1 ಲಕ್ಷ ಉದ್ಯೋಗ ಸೃಷ್ಠಿಯಾಗಲಿದೆ. ಬೆಂಗಳೂರಿನಲ್ಲಿ ಶೇ.70 ರಷ್ಟು ಹೂಡಿಕೆಯಾಗಿದೆ. ಮುಂದಿನ ಜಿಮ್ ಸಮಾವೇಶ 2025ರಲ್ಲಿ ನಡೆಯುತ್ತದೆ ಎಂದರು.

ನಾಳೆ ಸಿಎಂ ನೇತೃತ್ವದಲ್ಲಿ ಸುದ್ಧಿಗೋಷ್ಠಿ ನಡೆಯಲಿದೆ. ನಾಳೆ ಯಾವ ಜಿಲ್ಲೆಯಲ್ಲಿ ಎಷ್ಟು ಬಂಡವಾಳ ಹೂಡಿಕೆಯಾಗಿದೆ. ಯಾವ ವಲಯಕ್ಕೆ ಎಷ್ಟು ಬಂಡವಾಳ ಹೂಡಿಕೆಯಾಗಿದೆ ಅಂತಾ ಮಾಹಿತಿ ಕೊಡುತ್ತೇವೆ.  ಎಂದರು.

Key words: Capital- investment –exceeded- expectations -Minister -Murugesh Nirani.