ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು.

ಚಿತ್ರದುರ್ಗ,ಜೂನ್,12,2023(www.justkannada.in): ಲಾರಿಯನ್ನ ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ವಿಜಾಪುರದ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಕುಟುಂಬವೊಂದು ಗೋವಾ ಪ್ರವಾಸಕ್ಕೆ ತೆರಳಿ ವಾಪಸ್ ಆಗುತ್ತಿದ್ದ ವೇಳೆ ಈ ಅಪ‍ಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಯುವಕ ಓರ್ವ ಯುವತಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿಯನ್ನ ಹಿಂದಿಕ್ಕುವ ಭರದಲ್ಲಿ ಕಾರು ಲಾರಿಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಈ ಕುರಿತು ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: car-collided – lorry-Two died -on the spot.