Wednesday, September 16, 2026

BDA Apartments

ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಮೂವರು ಸಾವು BDA JK_Adv BDA Adv
Home Crime ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಮೂವರು ಸಾವು.

ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು: ಮೂವರು ಸಾವು.

ಬೆಂಗಳೂರು,ಅಕ್ಟೋಬರ್,3,2023(www.justkannada.in): ಲಾರಿಗೆ ಕಾರು ಡಿಕ್ಕಿಯಾಗಿ ಹೊತ್ತಿ ಉರಿದಿದ್ದು ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸೋಂಪುರ ಬಳಿಯ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಿಂಧೂ, ಪ್ರಣವಿ, ಕುಷಾವಿ ಮೂವರು ಮೃತಪಟ್ಟಿದ್ದು, ಮಹೇಂಧ್ರನ್ ಸ್ಥಿತಿ ಗಂಭೀರವಾಗಿದೆ.

ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆ . ಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈ ಮಗುವು ಕೂಡ ಮೃತಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.ಲಾರಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು accid

ಒಂದೇ ಕುಟುಂಬದ ನಾಲ್ವರು ಕಾರಿನಲ್ಲಿ ಇಂದು ಬೆಳಗಿನ ಜಾವ ನಾಲ್ಕು ಗಂಟೆಗೆ ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಬಂದು ಲಾರಿಗೆ ಡಿಕ್ಕಿ ಹೊಡೆದಿದೆ. ಬಳಿಕ ಮೋರಿಯ ಗೋಡೆಗೆ ಗುದ್ದಿದೆ. ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ.

ವಿಷಯ ತಿಳಿದು ಘಟನೆ ಸ್ಥಳಕ್ಕೆ ತಲಘಟ್ಟಪುರ ಸಂಚಾರ ಪೊಲೀಸರು ಭೇಟಿ ನೀಡಿದ್ದು,  ಈ ಬಗ್ಗೆ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Car -collides – lorry – fire-Three –death