ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ನಾಲ್ವರು ದುರ್ಮರಣ.

ಚಿತ್ರದುರ್ಗ ಸೆಪ್ಟಂಬರ್,4,2023(www.justkannada.in):  ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮಲ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಶಂಶುದ್ದೀನ್(40), ಮಲ್ಲಿಕಾ(37), ಖಲೀಲ್(42), ತಬ್ರೇಜ್(13) ಮೃತಪಟ್ಟವರು. ನರ್ಗೀಸ್, ರೆಹಾನ್, ರೆಹಮಾನ್ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸಪೇಟೆ ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು  ಚಿತ್ರದುರ್ಗ ಎಸ್ಪಿ ಧರ್ಮೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.  ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Car -collides – parked lorry- Four –death-chitradurga