ಕಾರು, ದ್ವಿಚಕ್ರ ವಾಹನ ನಡುವೆ ಡಿಕ್ಕಿ: ಯುವಕ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ಮೈಸೂರು, ಜನವರಿ 17, 2022 (www.justkannada.in): ಕಾರು, ದ್ವಿಚಕ್ರ ವಾಹನ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಭಿಷೇಕ್ (22) ಮೃತ ದುರ್ದೈವಿ. ರಕ್ಷಿತ್, ಹರ್ಷ ಗಾಯಾಳುಗಳು. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೈಸೂರಿನ ಕುಕ್ಕರಹಳ್ಳಿ ಮುಖ್ಯ ರಸ್ತೆಯಲ್ಲಿ ನೆನ್ನೆ ರಾತ್ರಿ ಈ ಘಟನೆ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಮೂವರು ಒಟ್ಟಿಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕೊಡಗಿನ ರಕ್ಷಿತ್, ಬೆಳಗಾಂನ ಹರ್ಷ, ನಂಜನಗೂಡಿನ ಪಂಚಳ್ಳಿ ಅಭಿಷೇಕ್ ಮೂವರು ಖಾಸಗಿ ಷೋರೂಂನಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ವೀಕೆಂಡ್ ಕರ್ಫ್ಯೂ ವೇಳೆ ಸ್ನೇಹಿತರ ಮನೆಗೆ ಹೋಗಿದ್ದ ಯುವಕರು. ಹಿಂದಿರುಗಿ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಕೆ.ಆರ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.