ಕಂಟೇನರ್ ಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು…

ಹಾಸನ,ಫೆಬ್ರವರಿ,13,2021(www.justkannada.in):  ಕಂಟೇನರ್ ಗೆ ಕಾರ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲಿ ನಡೆದಿದೆ.jk

ಚನ್ನರಾಯಪಟ್ಟಣದ ಹೊರವಲಯದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ದುರ್ಘಟನೆ ಸಂಭವಿಸಿದೆ.  ಕಾರಿನಲ್ಲಿದ್ದ ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ ನಾಲ್ವರು ಬೆಂಗಳೂರು ಮೂಲದವರಾಗಿದ್ದಾರೆ.Car -crash - container – accident-Four deaths -hassan

ಈ ಮದ್ಯೆ ನಾಲ್ವರು ಸ್ನೇಹಿತರು  ಬೆಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಮಂಗಳೂರಿನತ್ತ ಹೊರಟಿದ್ದ ಕಂಟೇನರ್ ಗೆ ಹಿಂಬದಿಯಿಂದ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಚನ್ನರಾಯಪಟ್ಟಣ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Key words: Car -crash – container – accident-Four deaths -hassan