ಬೆಳಗಾವಿ,ಜನವರಿ,6,2026 (www.justkannada.in): ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬಸವಂತ ಕಡೋಲ್ಕರ್ (32) ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಬಸವಂತ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದು, ಬಸವಂತ್ ಅವರ ಎದೆ, ಭುಜ ಸೇರಿದಂತೆ ನಾಲ್ಕು ಕಡೆ ಚಾಕುವಿನಿಂದ ಇರಿಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಬಸವಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
Key words: Minister, Lakshmi Hebbalkar, son, car driver, Knife stab







