ಕೊರೋನಾ ವೈರಸ್  ಬಗ್ಗೆ ಸುಳ್ಳು ಸುದ್ಧಿ ಹಬ್ಬಿಸಿದ್ರೆ ಬೀಳುತ್ತೆ ಕೇಸ್ …

ಬೆಂಗಳೂರು,ಮಾ,4,2020(www.justkannada.in):  ಕೊರೋನಾ ವೈರಸ್ ಭೀತಿಗೆ ಇಡೀ ವಿಶ್ವವೇ ತಲ್ಲಣಿಸಿದ್ದು, ದೇಶದಲ್ಲೂ ಕೂಡ ಕೊರೋನಾ ವೈರಸ್ ಆತಂಕ ಸೃಷ್ಠಿಸಿದೆ. ಈ ನಡುವೆ ಕೊರೋನಾ ಬಗ್ಗೆ ಸುಳ್ಳು ಸುದ್ದಿ  ಹಬ್ಬಿಸಲಾಗುತ್ತಿದ್ದು ಈ ಸುಳ್ಳು ಸುದ್ದಿಗಳ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಆರೋಗ್ಯ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಕೊರೋನಾ ವೈರಸ್ ಬಗ್ಗೆ ಸುಳ್ಳುಸುದ್ದಿ ಹಬ್ಬಿಸಿದ್ರೆ ಕ್ರಮ ಕೈಗೊಳ್ಳಲಾಗುತ್ತದೆ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ದ ಕೇಸ್ ದಾಖಲಿಸಲಾಗುತ್ತದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಪಂಕಜ್ ಕುಮಾರ್ ಪಾಂಡೆ,  ರಾಜ್ಯದಲ್ಲಿ ಯಾವುದೇ ಕೊರೋನಾ ಸೋಂಕಿನ ಭಯವಿಲ್ಲ. ಕರೋನಾ ಕುರಿತು ಸುಳ್ಳು ವದಂತಿ ಹಬ್ಬಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಕೇರಳ ಹಾಗೂ ತೆಲ್ಲಂಗಾಣದಲ್ಲಿ ಪೊಲೀಸ್ ಕೇಸ್ ದಾಖಲಿಸಲಾಗುತ್ತಿದೆ. ಅದೇ ರೀತಿ ರಾಜ್ಯದಲ್ಲೂ ವದಂತಿಗಳನ್ನು ಸೃಷ್ಟಿಸಿ ಪ್ರಸಾರ ಮಾಡುವವರ ವಿರುದ್ಧ ಕ್ರಮ ಕೈಕೊಳಲಾಗುವುದು ಎಂಬುದಾಗಿ  ತಿಳಿಸಿದ್ದಾರೆ.

ಕೊರೋನಾ ವೈರಸ್ ಸೋಂಕಿತರನ್ನ ಪತ್ತೆ ಹಚ್ಚಲು ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿ ರಾಜ್ಯ ಸರ್ಕಾರ  ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ದೇಶದಲ್ಲಿ 28 ಮಂದಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದ್ದು ಈ ಹಿನ್ನೆಲೆ ಎಲ್ಲೆಡೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

Key words: Case-file- false news- about –coronavirus-bangalore