ನೀತಿ ಸಂಹಿತೆ ಉಲ್ಲಂಘನೆ: ನಟ ಸೋನು ಸೂದ್ ವಿರುದ್ಧ ಪ್ರಕರಣ

ಬೆಂಗಳೂರು, ಫೆಬ್ರವರಿ 22, 2022 (www.justkannada.in): ನೀತಿ ಸಂಹಿತೆ ಉಲ್ಲಂಘನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಸಹೋದರಿ ಮಾಳವಿಕಾ ಸೂದ್ ಪರ ಸೋನು ಸೂದ್, ಮತದಾನದ ದಿನದಂದು ಚುನಾವಣೆ ಪ್ರಚಾರ ನಡೆಸಿದ್ದರು.

ಮತದಾನದ ದಿನ ನೀತಿ ಸಂಹಿತೆ ಉಲ್ಲಂಘಿಸಿ ಸಹೋದರಿ ಪರ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದರಿಂದ ಸೋನು ಸೂದ್ ವಿರುದ್ಧ ಮೊಗಾ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಂಗೇವಾಲಾ, ದರ್ಪುರ್, ಖಖರ್ನಾ ಹಳ್ಳಿಗಳಲ್ಲಿ ಸಹೋದರಿ ಪರ ಪ್ರಚಾರ ನಡೆಸಿದ್ದರು. ಚುನಾವಣೆ ದಿನ ಮತಗಟ್ಟೆಗಳಿಗೆ ಭೇಟಿ ನೀಡಿ ಗಮನ ಸೆಳೆದಿದ್ದರು. ಈ ವೇಳೆ ಅವರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದರು.