Monday, September 21, 2026

BDA Apartments

ಪತ್ನಿ ಕೊಲೆಗೆ ಯತ್ನ ಆರೋಪ: ಬೆಂಗಳೂರಿನ ಕೆಎಎಸ್ ಅಧಿಕಾರಿ ವಿರುದ್ಧ ಕೇಸ್ BDA JK_Adv ...
Home Crime ಪತ್ನಿ ಕೊಲೆಗೆ ಯತ್ನ ಆರೋಪ: ಬೆಂಗಳೂರಿನ ಕೆಎಎಸ್ ಅಧಿಕಾರಿ ವಿರುದ್ಧ ಕೇಸ್

ಪತ್ನಿ ಕೊಲೆಗೆ ಯತ್ನ ಆರೋಪ: ಬೆಂಗಳೂರಿನ ಕೆಎಎಸ್ ಅಧಿಕಾರಿ ವಿರುದ್ಧ ಕೇಸ್

ಬೆಂಗಳೂರು, ಜನವರಿ 24, ಜನವರಿ 2021 (www.justkannada.in): ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್‌ಕುಮಾರ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾತ್ರೆ ಬೆರೆಸಿದ್ದ ನೀರು ಕುಡಿಸಿ ಪತ್ನಿ ಕೊಲೆಗೆ ಯತ್ನಿಸಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ‘ನಗರದ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಸ್ಥಳೀಯ ನಿವಾಸಿಯೂ ಆದ ಕೆ.ಪಿ.ದೀಪ್ತಿ ಅವರು ದೂರು ನೀಡಿದ್ದಾರೆ.

ದಿನೇಶ್‌ಕುಮಾರ್ ಹಾಗೂ ಅವರ ಸಹೋದರನ ಪತ್ನಿ ರಮ್ಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿಸಿವೆ.

ಚಿತ್ರದುರ್ಗ ಜಿಲ್ಲೆಯ ಸಂತೆಬೆನ್ನೂರು ನಿವಾಸಿ ದಿನೇಶ್‌ಕುಮಾರ್ ಅವರನ್ನು 2015ರಲ್ಲಿ ಮದುವೆಯಾಗಿದ್ದೇನೆ. ಆದರೆ ಅವರು ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿಲ್ಲ ಎಂದು ದೀಪ್ತಿ ದೂರಿನಲ್ಲಿ ತಿಳಿಸಿದ್ದಾರೆ.