ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿಯಿಂದ ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮ ವಿಚಾರಣೆ…

ರಾಮನಗರ,ಫೆ,11,2020(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ತಾಯಿ ಗೌರಮ್ಮ ಅವರನ್ನ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲಿದೆ.

ಡಿ.ಕೆ ಶಿವಕುಮಾರ್ ವಿರುದ್ದದ ಅಕ್ರಮಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಮ್ಮ ಅವರನ್ನ ವಿಚಾರಣೆಯನ್ನ ಅವರ ನಿವಾಸದಲ್ಲೇ ಮಾಡಬೇಕು ಎಂದು ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆ ಇಂದು ರಾಮನಗರ ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯಲ್ಲಿರುವ  ಸಂಸದ ಡಿ.ಕೆ ಸುರೇಶ್ ನಿವಾಸದಲ್ಲಿ ಜಾರಿ ನಿರ್ದೇಶನಾಲಯ  ಗೌರಮ್ಮ ಅವರನ್ನ ವಿಚಾರಣೆ ನಡೆಸಲಿದೆ.

ಈ ನಡುವೆ ಗೌರಮ್ಮ ವಿಚಾರಣೆ ಹಿನ್ನೆಲೆ ಡಿ.ಕೆ ಸುರೇಶ್ ಅವರ ನಿವಾಸದಲ್ಲಿ ಬಿಗಿ ಭದ್ರತೆ ವಹಿಸಲಾಗಿದೆ.

Key words: Case -money laundering- Former minister -DK Sivakumar- mother- Gouramma- inquires -ED.