ಬಾಲಕಿ ಅನುಮಾನಸ್ಪದ ಸಾವು ಪ್ರಕರಣ: ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತು.

ಮಂಡ್ಯ,ಅಕ್ಟೋಬರ್,14,2022(www.justkannada.in):  ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಂಪ್ ನಲ್ಲಿ ಬಾಲಕಿಯ ಶವ ಅನುಮಾನಸ್ಪದವಾಗಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿ ಟ್ಯೂಷನ್ ಮಾಸ್ಟರ್ ಕಾಂತರಾಜುನೇ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತಾಗಿದೆ.

ಟ್ಯೂಷನ್​ ನೀಡುವ ನೆಪದಲ್ಲಿ ಕರೆಸಿಕೊಂಡ ಕಾಂತರಾಜ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ಬಹಿರಂಗಗೊಂಡಿದೆ. ಆರೋಪಿ ಕಾಂತರಾಜ್ ಬಾಲಕಿಗೆ ಟ್ಯೂಷನ್ ನೀಡುವುದಾಗಿ ಕರೆಸಿಕೊಂಡು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಳಿಕ ಈ ವಿಚಾರ ಬಾಲಕಿಯ ಮನೆಗೆ ತಿಳಿದರೆ ಪರಿಸ್ಥಿತಿ ಬೇರೆಯದ್ದೇ ಆಗುತ್ತದೆ ಎಂಬ ಭಯದಿಂದ ಬಾಲಕಿಯ ತಲೆಗೆ ರಾಡ್​ನಿಂದ ಹೊಡೆದು ಕತ್ತು ಹಿಸುಕಿ ಕೊಲೆ ಮಾಡಿರುವುದು ಸಾಬೀತಾಗಿದೆ.

ಘಟನೆ ನಡೆದ ಬಳಿಕ ಸ್ಥಳಕ್ಕೆ ಭೇಟಿಕೊಟ್ಟಿದ್ಧ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇದೀಗ ವರದಿ ಪೊಲೀಸರ ಕೈ ಸೇರಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ಸಾಬೀತಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿ ಆಧಾರದ ಮೇಲೆ ನ್ಯಾಯಾಲಯ ಅನುಮತಿ ಪಡೆದು ಪೋಕ್ಸೊ ಕಾಯ್ದೆ ದಾಖಲಿಸಿದ ಮಳವಳ್ಳಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈಗಾಗಲೇ ಆರೋಪಿ ಕಾಂತರಾಜುನನ್ನ  ಬಂಧಿಸಲಾಗಿದೆ.

Key words: case – suspicious death – girl-mandya-proved – murder -rape.