Saturday, September 19, 2026

BDA Apartments

ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಜಾತಿ‌ ನಿಂದನೆ ಅಡಿ ದೂರು ದಾಖಲು BDA JK_Adv BDA...
Home Front Page ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಜಾತಿ‌ ನಿಂದನೆ ಅಡಿ ದೂರು ದಾಖಲು.

ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಜಾತಿ‌ ನಿಂದನೆ ಅಡಿ ದೂರು ದಾಖಲು.

ಶಿವಮೊಗ್ಗ,ಆಗಸ್ಟ್,3,2023(www.justkannada.in):  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅರಣ್ಯ ಸಚಿವ ಈಶ್ವರ​ ಖಂಡ್ರೆ ಬಗ್ಗೆ ಅವಹೇಳನ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಜಾತಿ‌ ನಿಂದನೆ ಅಡಿ ದೂರು ದಾಖಲಾಗಿದೆ.

ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎಂಬುವವರು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ಧರಣಿ ನಡೆಸಿತ್ತು. ಪ್ರತಿಭಟನೆ ವೇಳೆ  ಮಲ್ಲಿಕಾರ್ಜುನ ಖರ್ಗೆ, ಈಶ್ವರ್ ಖಂಡ್ರೆಯವರ ಬಗ್ಗೆ  ಆರಗ ಜ್ಞಾನೇಂದ್ರ  ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಅರಗ ಜ್ಞಾನೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಆ ಬಳಿಕ ಅರಗ ಜ್ಞಾನೇಂದ್ರ ಅವರು ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು.

Key words: caste –abuse- complaint – against -former minister- Araga Gyanendra.