ಜಾತಿ ಆಧಾರದ ಮೇಲೆ ಪೋಸ್ಟಿಂಗ್ ಮಾಡಲು ಸಾಧ್ಯವಿಲ್ಲ: ಶಾಮನೂರು ಶಿವಶಂಕರಪ್ಪಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್.

ಬೆಳಗಾವಿ,ಅಕ್ಟೋಬರ್,6,2023(www.justkannada.in):  ರಾಜ್ಯದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿಕೆ ನೀಡಿದ್ಧ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪರಿಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ,  ಜಾತಿ ಆಧಾರದ ಮೇಲೆ ಪೋಸ್ಟಿಂಗ್ ಮಾಡಲು ಸಾಧ್ಯವಿಲ್ಲ.  ಶಾಮನೂರು ಶಿವಶಂಕರಪ್ಪ ಹೇಳಿದ್ದನ್ನ  ರಾಜ್ಯದ ಸಮಸ್ಯೆಯಾಗಿ ಬಿಂಬಿಸಲು ಸಾಧ್ಯವಿಲ್ಲ. ಶಾಮನೂರು ಮಾತಿಗೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ. ಇಂತಹ ಹೇಳಿಕೆ ಬಹಳಷ್ಟು ಬಂದಿದೆ. ಎಲ್ಲರಿಗೂ ಚಿಕ್ಕಪೇಟೆ ಕಬ್ಬನ್ ಪೇಟೆ ಬೇಕೆಂದರೇ ಆಗಲ್ಲ ಎಂದು ಕುಟುಕಿದರು.

Key words: Caste –based- posting – not allowed-Minister- Sathish Jarakiholi – Shamanur Shivshankarappa.