ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ: ರಾಹುಲ್ ಗಾಂಧಿ

ಬೆಂಗಳೂರು, ನವೆಂಬರ್ 21, 2023 (www.justkannada.in):  ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಜಾತಿ ಗಣತಿ ದೇಶದ ‘ಎಕ್ಸ್-ರೇ’. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜಸ್ಥಾನದಲ್ಲಿ ಜಾತಿ ಗಣತಿ ನಡೆಸಲಿದೆ ಮತ್ತು ನಮ್ಮ ಪಕ್ಷ ಕೇಂದ್ರದಲ್ಲಿ ಸರ್ಕಾರ ರಚಿಸಿದರೆ ರಾಷ್ಟ್ರ ಮಟ್ಟದಲ್ಲಿಯೂ ಜಾತಿ ಗಣತಿ ಮಾಡುತ್ತೇವೆ ಎಂದರು.

ಬಿಹಾರದಲ್ಲಿ ನಡೆಸಿದ ಜಾತಿ ಗಣತಿ ರೀತಿಯಲ್ಲೇ ರಾಜಸ್ಥಾನದಲ್ಲೂ ಜಾತಿ ಸಮೀಕ್ಷೆ ನಡೆಸಲಾಗುವುದು ಎಂದ ಅವರು, ಪ್ರಧಾನಿ ಮೋದಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.