ಜಾತಿ ಗಣತಿ ವರದಿ ಅವೈಜ್ಞಾನಿಕ: ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ-ಶಾಮನೂರು ಶಿವಶಂಕರಪ್ಪ.

ಬೆಂಗಳೂರು,ಫೆಬ್ರವರಿ,29,2024(www.justkannada.in):  ಸಿಎಂ ಸಿದ್ದರಾಮಯ್ಯಗೆ ಇಂದು ಬಹುನಿರೀಕ್ಷಿತ  ಜಾತಿ ಗಣತಿ ವರದಿಯನ್ನ  ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ  ಜಯಪ್ರಕಾಶ್ ಹೆಗ್ಡೆ ಸಲ್ಲಿಕೆ ಮಾಡಿದ ಬೆನ್ನಲ್ಲೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ವರದಿಗೆ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಮನೂರು ಶಿವಶಂಕರಪ್ಪ,  ಜಾತಿ ಗಣತಿ ವಿರೋಧಿಸಿ ವೀರಶೈವ ಮಹಾಸಭಾದಿಂದ ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ಇನ್ನು ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ ವೀರಶೈವ ಮಹಾಸಭಾ ಸಮ್ಮೇಳನದಲ್ಲಿ ಕೂಡ ಜಾತ ಗಣತಿ ವಿರೋಧಿಸಿ ನಿರ್ಣಯ ಅಂಗೀಕರಿಸಲಾಗಿದೆ ಎಂದರು.

ಜಾತಿ ಗಣತಿ ವರದಿ ಅವೈಜ್ಞಾನಿಕ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಮನೆ, ಮನೆಗೆ ಭೇಟಿ ನೀಡದೆ ಅವೈಜ್ಞಾನಿಕವಾಗಿ ತಯಾರಿಸಲಾದ ವರದಿಯನ್ನು ಸಮಾಜ ಒಪ್ಪುವುದಿಲ್ಲ. ಈ ನಿಟ್ಟಿನಲ್ಲಿ ಹೋರಾಟ ಮುಂದುವರೆಯಲಿದೆ ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದರು.

Key words: Caste census -report -unscientific -Shamanur Shivshankarappa.