Saturday, August 1, 2026

BDA Apartments

Home Front Page ಕಾವೇರಿ ವಿವಾದ:  ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

ಕಾವೇರಿ ವಿವಾದ:  ಪ್ರಧಾನಿ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

ಬೆಂಗಳೂರು,ಸೆಪ್ಟಂಬರ್,25,2023(www.justkannada.in): ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದ್ದು ಇದರಿಂದಾಗಿ ರಾಜ್ಯದ ಜನರು ರೈತರಿಗೆ ಸಂಕಷ್ಟ ಎದುರಾಗಿದೆ.

ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಳೆಯಾಗದೇ ಕರ್ನಾಟಕದ ರೈತರಿಗೆ ನೀರಿನ ಕೊರೆತೆ ಎದುರಾಗಿದೆ. ಹೀಗಾಗಿ ಕಾವೇರಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಿ ಎಂದು ಆಗ್ರಹಿಸಿದ್ದಾರೆ.

Key words: Cauvery –dispute-Former PM-HD Deve Gowda – letter -PM Modi.