ಕಾವೇರಿ ವಿವಾದ ಕುರಿತು ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕಲು ಸರ್ಕಾರ ಮೀನಾಮೇಷ- ಮಾಜಿ ಸಿಎಂ ಹೆಚ್.ಡಿಕೆ ವಾಗ್ದಾಳಿ.

0
4

ಚನ್ನಪಟ್ಟಣ,ಸೆಪ್ಟಂಬರ್,20,2023(www.justkannada.in):  ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರುನಿರ್ವಹಣಾ ಪ್ರಾಧಿಕಾರ ಆದೇಶಿಸಿದ್ದು ಈ ವಿಚಾರಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಚನ್ನಪಟ್ಟಣದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ದೆಹಲಿಯಲ್ಲಿ ಸಿಎಂ ಮತ್ತು ಡಿಸಿಎಂ ಸಭೆ ಮಾಡಿದ್ದಾರೆ. ಸುಪ್ರೀಂಕೋರ್ಟ್ ಗೆ ಅರ್ಜಿ ಹಾಕ್ತಿವಿ ಅಂತ ಕಾಲಹರಣ ಮಾಡಿದ್ದಾರೆ. ಅರ್ಜಿ ಹಾಕಲು ಮೀನಾಮೇಷ ಎಣಿಸುತ್ತಿದ್ದಾರೆ. ಇಷ್ಟೊತ್ತಿಗೆ ಈ ಬಗ್ಗೆ ಚಿಂತನೆ ನಡೆಸಬೇಕಗಿತ್ತು. ಆದರೆ  ಸರ್ಕಾರ ಇನ್ನೂ ಅ ಕೆಲಸ ಮಾಡಿಲ್ಲ ಎಂದು ಕಿಡಿಕಾರಿದರು.

ತಮಿಳುನಾಡು ತಿಂಗಳ ಹಿಂದೆಯೇ ಅರ್ಜಿ ಹಾಕಿದ್ದಾರೆ.  ಅರ್ಜಿ ಹಾಕಿದ ತಕ್ಷಣ ನೀವು ತಮಿಳುನಾಡಿಗೆ ನೀರು ಬಿಟ್ರಿ. ಆದರೆ ನೀವೂ ಕೂಡ ಅರ್ಜಿ ಹಾಕಬೇಕಿತ್ತು ಎಂದು  ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

Key words: Cauvery dispute -Govt. – Supreme Court – Former CM- HDK