ನವದೆಹಲಿ,ಸೆಪ್ಟಂಬರ್,21,2023(www.justkannada.in): ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯದ ಜನಪ್ರತಿನಿಧಿಗಳು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಗಜೇಂದ್ರ ಸಿಂಗ್ ಶೇಖಾವತ್ ನಿವಾಸದಲ್ಲಿ ಭೇಟಿಯಾಗಿ ನೀರು ಹಂಚಿಕೆ ವಿವಾದದ ಕುರಿತು ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಾರಥ್ಯದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು ಹಾಗೂ ಸಂಸದರೊಂದಿಗೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಮಾತುಕತೆ ನಡೆಸಿದರು.
ಈ ವೇಳೆ ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ರಾಜ್ಯದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕೃಷಿ ಸಚಿವ ಚಲುವರಾಯಸ್ವಾಮಿ, ಕಾನೂನು ಸಚಿವ ಎಚ್.ಕೆ.ಪಾಟೀಲ್, ಟಿ.ಬಿ.ಜಯಚಂದ್ರ ಮತ್ತಿತರರು ಉಪಸ್ಥಿತರಿದ್ದರು.
ಇನ್ನು ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ವಿವಾದ ಕುರಿತು ಇಂದು ಸುಪ್ರೀಂಕೋರ್ಟ್ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.
Key words: Cauvery Dispute- Union – Minister-meet- discussion – CM Siddaramaiah






