ಕಾವೇರಿ ವಿವಾದ:  ರಾಜಭವನ ಮುತ್ತಿಗೆಗೆ ಯತ್ನಿಸಿದ ವಾಟಾಳ್ ನಾಗರಾಜ್ ಸೇರಿ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಬೆಂಗಳೂರು,ಸೆಪ್ಟಂಬರ್,26,2023(www.justkannada.in):  ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ಕುಡಿಯುವ ನೀರಿಗೂ ಸಂಕಷ್ಟ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದೆ.

ಸರ್ಕಾರದ ನಡೆಯನ್ನ ಖಂಡಿಸಿ ಇಂದು ಬೆಂಗಳೂರು ಬಂದ್ ಮಾಡಲಾಗಿದೆ.  ಈ ನಡುವೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆ ಕಾರ್ಯಕರ್ತರು  ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸುವ ಮೂಲಕ ಪ್ರತಿಭಟಿಸಿದರು.

ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್,  ಪ್ರವೀಣ್ ಶೆಟ್ಟಿ,  ಸಾರಾ ಗೋವಿಂದು ಸೇರಿ ಕಾರ್ಯಕರ್ತರನ್ನ ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ವಾಟಾಳ್ ನಾಗರಾಜ್, ರಾಜ್ಯ ಸರಕಾರ ಪೊಲೀಸರ ಮೂಲಕ ಹೋರಾಟ ಹತ್ತಿಕ್ಕುತ್ತಿದೆ.  ಕರ್ನಾಟಕ ಪೊಲೀಸ್ ರಾಜ್ಯವಾಗಿ ಪರಿವರ್ತನೆಯಾಗಿದೆ ಪೊಲೀಸ್ ದೌರ್ಜನ್ಯ ಖಂಡಿಸಿ ನಾಳೇ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ. ಹೋರಾಟಗಾರರ ಮೇಲೆ ಪೊಲೀಸರ ದೌರ್ಜನ್ಯ ಎಂದಿಗೂ ಸಹಿಸಲ್ಲ ಎಂದು ವಾಗ್ದಾಳಿ ನಡೆಸಿದರು.

Key words: Cauvery dispute- Vatal Nagaraj – Raj Bhavan –protest