Saturday, August 8, 2026

BDA Apartments

Home Front Page ಎಲ್ಲಿವರೆಗೂ ಕಾವೇರಿ ಹೋರಾಟ ನಡೆಯುತ್ತೋ ಅಲ್ಲಿವರೆಗೂ ಬಿಜೆಪಿಯಿಂದ ಬೆಂಬಲ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಎಲ್ಲಿವರೆಗೂ ಕಾವೇರಿ ಹೋರಾಟ ನಡೆಯುತ್ತೋ ಅಲ್ಲಿವರೆಗೂ ಬಿಜೆಪಿಯಿಂದ ಬೆಂಬಲ-ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಹುಬ್ಬಳ್ಳಿ,ಸೆಪ್ಟಂಬರ್,28,2023(www.justkannada.in): ನಾಳೆಯ ಕರ್ನಾಟಕ ಬಂದ್ ಗೆ ಬಿಜೆಪಿ ಬೆಂಬಲ ನೀಡಲಿದೆ. ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ,  ತಮಿಳುನಾಡಿಗೆ ಈಗ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ದಿ‌ ಬಂದಿದೆ. ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು‌ ಟ್ರಿಬ್ಯುನಲ್ ಆದೇಶವನ್ನ ಉಲ್ಲಂಘನೆ ಮಾಡಿದೆ. ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಉತ್ತರ ಕರ್ನಾಟಕ ಬಾಗದಲ್ಲಿ ಸಾಕಷ್ಟು ಬರಗಾಲ ಇದೆ.  ಮಳೆಯಿಲ್ಲದೆ ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದದಾರೆ. ಆದರೆ ಈವರೆಗೂ ಬೆಳೆ ಪರಿಹಾರಕ್ಕೆ ರಾಜ್ಯಸರ್ಕಾರ ಮುಂದಾಗಿಲ್ಲ. ಹಿಂದೆ ಪ್ರವಾಹ ಬಂದಾಗ ನಾವು 2 ಪಟ್ಟು ಪರಿಹಾರ ನೀಡಿದ್ದವು . ರಾಜ್ಯ ಸರ್ಕಾರ ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲ ಎಂದು ಬೊಮ್ಮಾಯಿ ಕಿಡಿ ಕಾರಿದರು.

Key words: Cauvery fight-BJP- support-former CM- Basavaraj Bommai.