Saturday, October 10, 2026

BDA Apartments

Increase in COVID cases: DC’s village stay program with held BDA JK_Adv BDA Adv
Home Front Page ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಶಾಕ್: ನಿತ್ಯ 9,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಶಾಕ್: ನಿತ್ಯ 9,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

ಬೆಂಗಳೂರು,ಆಗಸ್ಟ್,24,2026 (www.justkannada.in):  ಕಾವೇರಿ ನದಿ ನೀರು ಹಂಚೆಕೆ ವಿಚಾರದಲ್ಲಿ ಪದೇ ಪದೇ  ಕರ್ನಾಟಕಕ್ಕೆ ಅನ್ಯಾಯವಾಗುತ್ತಲೇ ಇದ್ದು ಇದೀಗ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಶಾಕ್ ನೀಡಿದೆ.

ಮುಂದಿನ 15 ದಿನಗಳ ಕಾಲ ನಿರಂತರವಾಗಿ ಪ್ರತಿದಿನ 9,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ  ಕಾವೇರಿ ನೀರು ನಿಯಂತ್ರಣ ಸಮಿತಿ (CWRC)  ಆದೇಶಿಸಿದೆ.  ತಮಿಳುನಾಡಿಗೆ ಅಗತ್ಯ ಪ್ರಮಾಣದ ನೀರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ನಾಳೆ ಬೆಳಿಗ್ಗೆ 8 ಗಂಟೆಯಿಂದಲೇ ಜಾರಿಗೆ ಬರುವಂತೆ ನೀರು ಹರಿಸುವ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಸೂಚಿಸಲಾಗಿದೆ.ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಶಾಕ್: ನಿತ್ಯ 9,000 ಕ್ಯೂಸೆಕ್ ನೀರು ಹರಿ...

ಅಂತಾರಾಜ್ಯ ಗಡಿ ಬಿಳಿಗುಂಡ್ಲುವಿನಲ್ಲಿ ನೀರಿನ ನಿರಂತರ ಹರಿವನ್ನು ಖಚಿತಪಡಿಸಿಕೊಳ್ಳುವಂತೆ ಕರ್ನಾಟಕ ಸರ್ಕಾರಕ್ಕೆ ಸಮಿತಿ ಆದೇಶಿಸಿದೆ. ಮುಂದಿನ 15 ದಿನಗಳ ಅವಧಿಯಲ್ಲಿ ತಮಿಳುನಾಡಿಗೆ ಒಟ್ಟು 11.66 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು  ಸಿಡಬ್ಲ್ಯುಆರ್  ಸಿ ಸ್ಪಷ್ಟಪಡಿಸಿದೆ.ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಶಾಕ್ jk02_new jk02 new

Key words: Cauvery issue, CWRC, instructs, release, 9,000 cusecs, water