ಕಾವೇರಿ ನೀರು ವಿಚಾರದಲ್ಲಿ ಸರ್ಕಾರವೇ ಹೋರಾಟಕ್ಕೆ ನಿಂತಿದೆ: ಬಂದ್ ನಿಂದ ಯಾವುದೇ ಪ್ರಯೋಜನ ಇಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಸೆಪ್ಟಂಬರ್,23,2023(www.justkannada.in):  ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಆಗ್ರಹಿಸಿ ಸೆಪ್ಟಂಬರ್ 26ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರು ಬಂದ್ ಮಾಡುವುದರಿಂದ ಯಾವುದೇ ಅನುಕೂಲ ಆಗಲ್ಲ. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರವೇ ಹೋರಾಟಕ್ಕೆ ನಿಂತಿದೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರು ಬಂದ್ ಮಾಡುವುದು ಬೇಡ,  ಬೆಂಗಳೂರು ಬಂದ್ ಮಾಡುವುದರಿಂದ ಯಾವುದೇ ಅನುಕೂಲ ಆಗಲ್ಲ. ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರವೇ ಹೋರಾಟಕ್ಕೆ ನಿಂತಿದೆ. ಬೆಂಗಳೂರು ಮರ್ಯಾದೆ ಹಾಳು ಮಾಡಿದರೆ ನೀವೇ ಚುಚ್ಚಿಕೊಂಡಂತೆ ಎಂದರು.

ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಮೂರ್ಖ ಸರ್ಕಾರ ಎಂದು ಟೀಕಿಸಿದ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಟಾಂಗ್ ನೀಡಿದ ಡಿ.ಕೆ ಶಿವಕುಮಾರ್, ನಾವು ಮೂರ್ಖರೇ, ನಾವು ರಾಜ್ಯದ ರೈತರ ಹಿತ ಕಾಯಲು ನಿಂತಿದ್ದೇವೆ ಎಂದರು.

 

ಕಾವೇರಿ ವಿಚಾರದಲ್ಲಿ ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಲಿ  ಎಂದು ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಶಾಸಕ ಸಿಟಿ ರವಿಗೆ ತಿರುಗೇಟು ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಸಿಟಿ ರವಿಯವರಿಗೆ ಸದ್ಯಕ್ಕೆ ಎಲ್ಲೂ ಜಾಗವಿಲ್ಲ. ಹಾಗಾಗಿ ಮಂಡ್ಯಕ್ಕೆ ಹೋಗಿದ್ದಾರೆ. ಪ್ರಧಾನಿ ಮಧ್ಯಪ್ರವೇಶ ಮಾಡಲಿ ಅಂತ ದೇವೇಗೌಡರೇ ಹೇಳಿದ್ದಾರೆ ಎಂದು ತಿಳಿಸಿದರು.

Key words: Cauvery issue- Govt – fighting -Bandh – no use – DCM -DK Shivakumar