ಕಾವೇರಿ ನದಿ ನೀರು ವಿಚಾರ: ಕರ್ನಾಟಕಕ್ಕೆ ಮತ್ತೆ ಹಿನ್ನಡೆ.

ನವದೆಹಲಿ, ನವೆಂಬರ್ 3,2023(www.justkannada.in):  ರಾಜ್ಯದಲ್ಲಿ ಮುಂಗಾರು ಮಳೆಯಾಗದೇ ಜಲಾಶಯಗಳು ಭರ್ತಿಯಾಗದೇ ಬರಗಾಲ ಆವರಿಸಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೂ ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಪದೇ ಪದೇ ಅನ್ಯಾಯವಾಗುತ್ತಿದ್ದು ಇದೀಗ  ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ.

ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿದ್ದ  ಆದೇಶ ಪ್ರಶ್ನಿಸಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಮೊರೆ ಹೋದ ಕರ್ನಾಟಕಕ್ಕೆ ಇಲ್ಲೂ ಕೂಡ ಅನ್ಯಾಯವಾಗಿದೆ.

ಇಂದು ಸಭೆ ನಡೆಸಿದ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶವನ್ನು ಎತ್ತಿಹಿಡಿದ್ದು, ನವೆಂಬರ್ 23ರ ವರೆಗೆ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ ನೀಡಿದೆ.

ಇದರೊಂದಿಗೆ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದಂತಾಗಿದೆ. ತಮಿಳುನಾಡಿಗೆ 2,600 ಕ್ಯೂಸೆಕ್​ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೋಮವಾರ ಸೂಚನೆ ನೀಡಿತ್ತು.

ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಮಂಡ್ಯದಲ್ಲಿ ರೈತರ ಹೋರಾಟ ಮುಂದುವರಿದಿದೆ. ತಮಿಳುನಾಡಿನಲ್ಲಿ ನೀರಾವರಿ ವಿಚಾರದಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೂ ಸಹ ತಮಿಳುನಾಡಿಗೆ ನೀರು ಬಿಡುವುದಕ್ಕೆ ಆದೇಶಿಸಿರುವುದನ್ನ ವಿರೋಧಿಸಿ ಹೋರಾಟ ನಡೆಸುತ್ತಿದ್ದಾರೆ.

Key words: Cauvery water –issue- Another – Injustice- Karnataka.