Friday, October 9, 2026

BDA Apartments

Home Front Page ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ- JDS  ಆರೋಪ

ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ- JDS  ಆರೋಪ

ಬೆಂಗಳೂರು,ಜುಲೈ,8,2026 (www.justkannada.in):  ಈ ಬಾರಿ ಮುಂಗಾರು ಮಳೆ ಸರಿಯಾಗಿ ಆಗದೇ ಇರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕುಸಿದ ಕಂಡಿದೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಉಂಟಾಗಿದೆ.  ಆದರೂ ಸಹ  ತಮಿಳುನಾಡಿಗೆ ರಾಜ್ಯ ಸರ್ಕಾರ ಕದ್ದುಮುಚ್ಚಿ ನೀರು ಹರಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ರಾಜ್ಯ ಜೆಡಿಎಸ್ ಘಟಕ ಈ ಆರೋಪ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ. ನಮ್ಮ ಕರ್ನಾಟಕದ ರೈತರ ಹೊಟ್ಟೆ ಮೇಲೆ ಹೊಡೆದು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ಖಂಡನೀಯ ಎಂದಿದೆ.ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ- JDS ಆರೋಪ krs

ಅಣೆಕಟ್ಟೆಯಲ್ಲಿ ನೀರಿಲ್ಲ ಎಂದು ನಮ್ಮ ರೈತರಿಗೆ ಬೆಳೆ ಬೆಳೆಯದಂತೆ ಹೇಳುವ ರೈತವಿರೋಧಿ ಸಿಎಂ ಡಿಕೆ ಶಿವಕುಮಾರ್ ಅವರೇ ತಮಿಳುನಾಡಿಗೆ ಕದ್ದುಮುಚ್ಚಿ ನೀರು ಬಿಡುತ್ತಿರುವುದು ಯಾರ ಓಲೈಕೆಗಾಗಿ? ಎಂದು ಜೆಡಿಎಸ್ ಕಿಡಿಕಾರಿದೆ.ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ jk02_new jk02 new

Key words:  Cauvery water, secretly, released, Tamil Nadu, JDS