ತಮಿಳುನಾಡಿಗೆ ಬೇಡಿಕೆಯಂತೆ ಕಾವೇರಿ ನೀರು ಬಿಡಲು ಆಗುತ್ತಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಸೆಪ್ಟಂಬರ್,8,2023(www.justkannada.in):  ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯಗಳು ಭರ್ತಿಯಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆಯೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದಂತೆ 15 ದಿನಗಳ ಕಾಲ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ.

ಈ ಕುರಿತು   ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ತಮಿಳುನಾಡಿಗೆ ಬೇಡಿಕೆಯಂತೆ ಕಾವೇರಿ ನೀರು ಬಿಡಲು ಆಗುತ್ತಿಲ್ಲ ಸದ್ಯಕ್ಕೆ ಕೋರ್ಟ್ ಆದೇಶದಂತೆ ಕಾವೇರಿ ನೀರು ಬಿಟ್ಟಿದ್ದೇವೆ ಮಳೆ ಇಲ್ಲದೆ ನಮ್ಮ ಡ್ಯಾಂಗಳಲ್ಲಿ ನೀರಿನ ಕೊರತೆ ಇದೆ. ಮುಂದಿನ ದಿನಗಳಲ್ಲಿ ನೀರು ಬಿಡಲು ಸಮಸ್ಯೆ ಇದೆ. ಈ ಬಗ್ಗೆ ಕೋರ್ಟ್ ನಲ್ಲಿ ಮನವರಿಕೆ ಮಾಡುತ್ತೇವೆ. ರೈತರ ಹಿತ ಕಾಪಾಡುವುದಕ್ಕೆ ನಮ್ಮ ಸರ್ಕಾರ ಬದ್ಧ ಎಂದರು.

Key words: Cauvery water – not being- released – Tamil Nadu – demand-DCM DK Shivakumar.