Monday, October 12, 2026

Dasara Wishes

ಯಾದಗಿರಿಗೆ ಕೇಂದ್ರ ಅಧ್ಯಯನ ತಂಡ ಭೇಟಿ: ನೆರೆಹಾನಿ ಪ್ರದೇಶಗಳ ಪರಿಶೀಲನೆ DasraWishes_...
Happy Dasara
Home Front Page ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ: ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ- ಕುರುಬೂರು ಶಾಂತಕುಮಾರ್ ಕಿಡಿ.

ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ: ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ- ಕುರುಬೂರು ಶಾಂತಕುಮಾರ್ ಕಿಡಿ.

ಬೆಂಗಳೂರು,ಸೆಪ್ಟಂಬರ್,26,2023(www.justkannada.in):  ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆಯನ್ನ ರಾಜ್ಯ ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.

ಮೈಸೂರು ಬ್ಯಾಂಕ್ ಸರ್ಕಲ್ ​ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಕುರುಬೂರು ಶಾಂತಕುಮಾರ್ ಸೇರಿ ಪ್ರತಿಭಟನಕಾರರನ್ನ ವಶಕ್ಕೆ ಪಡೆದರು.

ಈ ವೇಳೆ ಮಾತನಾಡಿದ ಕುರುಬೂರು ಶಾಂತಕುಮಾರ್, ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ. ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಸರ್ಕಾರ ಮಾಡುತ್ತಿದೆ. ನಮ್ಮ ಸರ್ಕಾರ ತಮಿಳುನಾಡಿಗೆ ನೀರು ಹರಿಸಿ ನೀರುಗಂಟಿ ಕೆಲಸ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ: ಕರ್ನಾಟಕ ಸರ್ಕಾರ ನೀರಗಂಟಿ ಸರ್ಕಾರ- ಕುರ...

ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಸದ್ಯದವರೆಗೂ ಬಂದ್ ಯಶಸ್ವಿಯಾಗಿದೆ. ಎಲ್ಲರೂ ಬೆಂಬಲ ನೀಡಿದ್ದಾರೆ. 144 ಸೆಕ್ಷನ್ ಹಾಕಬಾರದಿತ್ತು. ನಮ್ಮ ಹೋರಾಟ, ಚಳುವಳಿ ಇರಲಿದೆ ಎಂದರು.

Key words: Caveri dispute- Karnataka- Niraganti Government- Kuruburu Shanthakumar