ಬೆಂಗಳೂರಿನಲ್ಲೂ ಕಾವೇರಿದ ಕಾವೇರಿ ಹೋರಾಟ: ಕರವೇಯಿಂದ ಪ್ರತಿಭಟನೆ , ಆಕ್ರೋಶ.

ಬೆಂಗಳೂರು,ಸೆಪ್ಟಂಬರ್,23,2023(www.justkannada.in):  ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ಇಂದು ಮಂಡ್ಯ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಕಾವೇರಿ ಹೋರಾಟದ ಕಿಚ್ಚು ಕಾವೇರಿದೆ.

ಬೆಂಗಳೂರಿನ  ಎಲೆಕ್ಟ್ರಾನ್ ಸಿಟಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯುತ್ತಿದ್ದು ತಮಿಳನಾಡು ಸರ್ಕಾರದ ಭೂತ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು ದೆಹಲಿಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇತ್ತ ನಗರದ ಅತ್ತಿಬೆಲೆ ಗಡಿಭಾಗದಲ್ಲಿ ಕನ್ನಡ ಪರ ಹೋರಾಟಗಾರರು ಜಮಾವಣೆಯಾಗಿದ್ದು ಧರಣಿ ನಡೆಸಿಲಿದ್ದಾರೆ.  ಬೆಂಗಳೂರಿನಲ್ಲೂ ಕಾವೇರಿ ಹೋರಾಟ ತೀವ್ರಗೊಳ್ಳುತ್ತಿರುವ ಹಿನ್ನೆಲೆ,  ಬೆಂಗಳೂರು ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಹೈಅಲರ್ಟ್​ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡುವಂತೆ ಬೆಂಗಳೂರು ಪೊಲೀಸ್​​ ಕಮಿಷನರ್ ಬಿ.ದಯಾನಂದ್ ಆಯಾ ವಲಯ ಹೆಚ್ಚುವರಿ ಆಯುಕ್ತರು, ಡಿಸಿಪಿಗಳಿಗೆ ಸೂಚನೆ ಕೊಟ್ಟಿ ನೀಡಿದ್ದಾರೆ.

Key words: caveri fight-Bengalur- protest – outrage.