ಕನ್ನಡ ಭಾವನೆಗಳನ್ನು ದಮನ ಮಾಡಬಾರದು: ವಶಕ್ಕೆ ಪಡೆದಿರುವ ಹೋರಾಟಗಾರರ ಬಿಡುಗಡೆಗೆ ಹೆಚ್.ಡಿಕೆ ಆಗ್ರಹ.

ಬೆಂಗಳೂರು,ಸೆಪ್ಟಂಬರ್,29,2023(www.justkannada.in):  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿತ್ತು. ರಾಜ್ಯದ ರೈತರು ಜನರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತವಾಗಿತ್ತು.  ಈ ಕುರಿತು ಟ್ವಿಟ್ ಮಾಡಿರುವ  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಾವೇರಿಗಾಗಿ ಬಂದ್​ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್​ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ  ಎಂದಿದ್ದಾರೆ.

ಹಾಗೆಯೇ ಕಾಂಗ್ರೆಸ್ ಸರ್ಕಾರ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ  ಆಗ್ರಹಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಕಾವೇರಿ ನಮ್ಮದು ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

ನಾಡು, ನುಡಿ, ನೆಲ, ಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ ಹಾಗೂ ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಘಂಟೆ ಆಗಬೇಕು ಎಂದು ಹೆಚ್.ಡಿಕೆ ತಿಳಿಸಿದ್ದಾರೆ.

Key words: caveri fight-Kannada sentiments – not be- suppressed-HDK