ಜನರ ಹಿತಕ್ಕಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ಕೊಡುತ್ತೇವೆ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಆಗಸ್ಟ್,23,2023(www.justkannada.in): ಕಾವೇರಿ ನದಿ ನೀರು ವಿಚಾರ ಸಂಬಂಧ ಸರ್ಕಾರ ರಾಜ್ಯದ ಜನರ ಹಿತ ಕಾಪಾಡುವ ಭರವಸೆ ನೀಡಿದೆ. ಜನರ ಹಿತಕ್ಕಾಗಿ ತೆಗೆದುಕೊಳ್ಳುವ ನಿರ್ಧಾರಕ್ಕೆ ಬೆಂಬಲ ಕೊಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದು ಸಂತಸ ತಂದಿದ್ದು,  ರಾಜ್ಯ ಸರ್ಕಾರ ನಮ್ಮ ರೈತರ ಹಿತರಕ್ಷಣೆ ಮಾಡಬೇಕು. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ನೀರಾವರಿ ಮಂತ್ರಿಗಳು ರೈತರು ಅರ್ಜಿ ಹಾಕಲಿ ಎಂದಿದ್ದಾರೆ. ಈ ರೀತಿ ಮಾತನಾಡಿರುವುದು ಸರಿಯಲ್ಲ. ಈಗಾಗಲೇ ಸುಪ್ರೀಂಕೋರ್ಟ್​ಗೆ ಸರ್ಕಾರ ಅರ್ಜಿ ಸಲ್ಲಿಸಿದೆ. ನಾವು ಯಾವ ರೀತಿ ವಾದ ಮಂಡಿಸಬೇಕೆಂಬ ಬಗ್ಗೆ ಚರ್ಚಿಸಿ. ನಾವು ರೈತರ ಪರವಾಗಿ ನಿಲ್ಲಬೇಕು ಎಂದರು.

ಸರ್ವಪಕ್ಷಗಳ ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಹೆಚ್, ​ಡಿಕೆ, ಸರ್ವಪಕ್ಷ ಸಭೆಯಲ್ಲಿ ಸರ್ಕಾರಕ್ಕೆ ಹಲವು ಸಲಹೆಗಳನ್ನು ಕೊಟ್ಟಿದ್ದೇವೆ. ಸುಪ್ರೀಂಕೋರ್ಟ್​​ನಲ್ಲಿ ಪ್ರಬಲ ವಾದ ಮಂಡನೆಗೆ ಸಲಹೆ ಕೊಡಲಾಗಿದೆ ಎಂದರು.

Key words: cavery dispute-support – decision – benefit – people-Former CM -HD Kumaraswamy.