ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ: ಬಳ್ಳಾರಿಯಲ್ಲಿ ಥಿಯೇಟರ್ ಬಂದ್ ಮಾಡಿ ಡಿಸಿ ಆದೇಶ

ಬಳ್ಳಾರಿ, ಜನವರಿ 17, 2022 (www.justkannada.in): ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜನವರಿ 31, 2022ರವರೆಗೆ ಸಿನಿಮಾ ಮಂದಿರಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಕೊರೋನಾ ಪ್ರಕರಣಗಳ ಹೆಚ್ಚಳವನ್ನು ತಡೆಗಟ್ಟುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಜ.31ರವರೆಗೆ ಚಿತ್ರಮಂದಿರಗಳನ್ನು ಕ್ಲೋಸ್ ಮಾಡಿ ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶಕ್ಕೆ ಥಿಯೇಟರ್ ಮಾಲೀಕರು ವಿರೋಧ ವ್ಯಕ್ತ ಪಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಹೊಸ ರೂಲ್ಸ್ ನಿಂದ ನಮಗೆ ಅಪಾರ ನಷ್ಟ ಆಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.