ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ವಿಚಾರ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಹೀಗೆ…

ಬೆಂಗಳೂರು,ಅಕ್ಟೋಬರ್,5,2020(www.justkannada.in):  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಜನಪ್ರತಿಧಿಗಳು ಪ್ರಾಮಾಣಿಕರಾಗಿ ಕೆಲಸ ಮಾಡಿದಾಗ ಯಾವದಕ್ಕೂ ಅಂಜುವ ಅಗತ್ಯ ಇಲ್ಲ. ಪ್ರಾಮಾಣಿಕರಿದ್ದಾಗ ಯಾವುದಕ್ಕೂ ಭಯ ಪಡುವ ಅವಶ್ಯಕತೆ ಇರಲ್ಲ ಎಂದು ಹೇಳಿದ್ದಾರೆ.jk-logo-justkannada-logo

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ,  ಸಾಮಾನ್ಯವಾಗಿ ಇಂತಹ ಸಂದರ್ಭದಲ್ಲಿ ರಾಜಕೀಯ ಪಿತೂರಿ ಅಂತಾನೇ ಹೇಳೋದು. ಯಾವುದೇ ಜನಪ್ರತಿನಿಧಿ ಪ್ರಾಮಾಣೀಕವಾಗಿ ಕೆಲಸ ಮಾಡಿದ್ರೆ ಹೆದರುವ ಅವಶ್ಯಕತೆ ಇಲ್ಲ ನಾವು ಸರಿಯಾಗಿ ಕೆಲಸ ಮಾಡಿದಿದ್ರೆ ಯಾವುದೇ ರೀತಿಯ ತನಿಖೆ ಎದುರಿಸಲು ಸಿದ್ದ ಇರಬೇಕು. ದೇಶದ ಕಾನೂನು ವ್ಯವಸ್ಥೆಯಲ್ಲಿ ಸತ್ಯಕ್ಕೆ ಜಯ ದೊರಕಲಿದೆ. ಹೀಗಾಗಿ ಸತ್ಯ ಇನ್ನೂ ಹೊರಗೆ ಬರುತ್ತದೆ ಎಂಬುದು ನನ್ನ ಅಭಿಪ್ರಾಯ  ಎಂದಿದ್ದಾರೆ.cbi-raids-dk-shivakumar-residence-former-cm-hd-kumaraswamy-reaction

ಸಂವಿಧಾನದಲ್ಲಿ ಸ್ವಾಯತ್ತ ಸಂಸ್ಥೆಗಳು ಗೌರವ  ಉಳಿಸುತ್ತವೆ ಎಂಬುದು ನನ್ನ ಅಭಿಪ್ರಾಯ. ಆದರೆ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕರಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ. ಹೀಗಾಗಿ. ಯಾತಕ್ಕೆ ದಾಳಿ ಮಾಡಿದ್ವಿ ಎಂಬ ಸತ್ಯವನ್ನು ಸಿಬಿಐ‌ನವರು ಹೇಳಬೇಕು. ಇಲ್ಲ ಪ್ರಕರಣದಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕರು ಅವರು ಏನು ಎಂದು ಸತ್ಯ ಹೇಳಬೇಕು. ಇದರ ಬಗ್ಗೆ ನಾನು ಚರ್ಚೆ ಮಾಡೋದು ಉಪಯೋಗವಿಲ್ಲ ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Key words: CBI -raids – DK Shivakumar- residence- Former CM -HD Kumaraswamy -reaction