Thursday, August 27, 2026

BDA Apartments

Home Front Page ವಿನಯ್ ಕುಲಕರ್ಣಿಯನ್ನ ಸಿಬಿಐ ವಶಕ್ಕೆ ಪಡೆದ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ..?

ವಿನಯ್ ಕುಲಕರ್ಣಿಯನ್ನ ಸಿಬಿಐ ವಶಕ್ಕೆ ಪಡೆದ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ..?

ಮಂಗಳೂರು,ನವೆಂಬರ್,5,2020(www.justkannada.in):  ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ಬಂಧಿಸಿರುವ ವಿಚಾರ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಕೊಲೆ ಹಿಂದಿನ ಸತ್ಯ ಹೊರ ಬರುತ್ತದೆ ಎಂದು ಹೇಳಿದ್ದಾರೆ.jk-logo-justkannada-logo

ಈ ಕುರಿತು ಮಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಈ ಹಿಂದೆಯೇ ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯಾಗಬೇಕಿತ್ತು. ಯೊಗೇಶ್ ಕುಟುಂಬಸ್ಥರು ತುಂಬಾ ನೊಂದಿದ್ದಾರೆ. ಇದೀಗ ಸಿಬಿಐ ತನಿಖೆಯಿಂದ ಕೊಲೆ ಹಿಂದಿನ ಸತ್ಯ ಹೊರಬರುತ್ತದೆ ಎಂದು ತಿಳಿಸಿದರು.

ಪ್ರಕರಣ ವಿಚಾರಣೆ ಹಂತದಲ್ಲಿರುವ ಹಿನ್ನೆಲೆ ಪ್ರಕರಣದ ಬಗ್ಗೆ ಹೆಚ್ಚು ಮಾತನಾಡಲು ಆಗಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.cbi-vinay-kulkarni-cm-bs-yeddyurappa-reaction

2016ರಲ್ಲಿ ಧಾರವಾಡದ ಸಪ್ತಾಪುರದಲ್ಲಿ ಯೋಗೇಶ್​ ಗೌಡ ಮಾಲೀಕತ್ವದ ಜಿಮ್​ ಬಳಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಸೆಪ್ಟೆಂಬರ್ 2019ರಲ್ಲಿ ಸಿಬಿಐ ಹತ್ಯೆ ಪ್ರಕರಣದ ವಿಚಾರಣೆ ಆರಂಭಿಸಿತ್ತು. ಇದೀಗ ವಿನಯ್ ಕುಲಕರ್ಣಿಯವರನ್ನು ವಶಕ್ಕೆ ಪಡೆದಿರುವ ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

Key words: CBI- Vinay Kulkarni-CM BS Yeddyurappa- reaction