Sunday, August 23, 2026

BDA Apartments

Home Front Page ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಸಾಧ್ಯತೆ

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಸಾಧ್ಯತೆ

ನವದೆಹಲಿ, ಮೇ 16, 2021 (www.justkannada.in): ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದಿಗೆ ಚಿಂತನೆ ನಡೆದಿದೆ.

ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಕೇಂದ್ರ ಶಿಕ್ಷಣ ಸಚಿವರು ಈ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

17ರಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ನೇತೃತ್ವದಲ್ಲಿ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ದೇಶದಲ್ಲಿ ಕೊರೊನಾ ಸೋಂಕು ಮತ್ತು ಸಾವಿನ ಸಂಖ್ಯೆ ಏರಿಕೆಯಾದ ಹಿನ್ನೆಲೆಯಲ್ಲಿ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದು ಮಾಡಬೇಕೆಂಬ ಬೇಡಿಕೆ ಹೆಚ್ಚಾಗಿದೆ. ಅನೇಕ ನಾಯಕರು ಕೂಡ ಪರೀಕ್ಷೆ ರದ್ದು ಮಾಡುವ ಬಗ್ಗೆ ಆಗ್ರಹಿಸಿದ್ದಾರೆ.

ಎಲ್ಲ ರಾಜ್ಯಗಳ ಶಿಕ್ಷಣ ಕಾರ್ಯದರ್ಶಿಗಳೊಂದಿಗೆ ಸಂವಾದ ನಡೆಸಿದ ನಂತರ ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದುಪಡಿಸಲು ಶಿಕ್ಷಣ ಸಚಿವರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.