ನನ್ನ ವಿರುದ್ಧ ಸಿಡಿ ಮಾಡಿರುವುದು ಕೇಳಿದ್ರೆ ಆಶ್ಚರ್ಯವಾಗುತ್ತೆ- ಶಾಸಕ ಎಂ.ಪಿ ರೇಣುಕಾಚಾರ್ಯ.

ನವದೆಹಲಿ,21,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಯ ಸುದ್ದಿ ತಾರಕಕ್ಕೇರಿದ್ದು, ಈ ಮಧ್ಯೆ ಸಿಎಂ ಬಿಎಸ್ ವೈ ಪರ ಬ್ಯಾಟ್ ಬೀಸಿ ವಿರೋಧಿ ಬಣಗಳಿಗೆ ಟಕ್ಕರ್ ಕೊಡುತ್ತಿದ್ಧ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ದಿಢೀರ್ ದೆಹಲಿಗೆ ತೆರಳಿದ್ದು ಸಿಡಿ ಜಾಲಕ್ಕೆ ಸಿಲುಕಿದ್ದಾರೆಯೇ ಎಂಬ ಪ್ರಶ್ನೆ ಎದ್ಧಿದೆ.jk

ಇನ್ನು ಸಿಎಂ ಬದಲಾವಣೆ ಮಾಡಿದ್ರೇ ಮುಂದೆ ದೊಡ್ಡ ಹೊಡೆತವನ್ನೇ ಅನುಭವಿಸಬೇಕಾಗುತ್ತದೆ ಎಂಬುದಾಗಿ ಅನೇಕ ಮಠಾಧೀಶರು ಬಿಜೆಪಿ ಹೈಕಮಾಂಡ್ ಗೆ ಖಡಕ್ ಎಚ್ಚರಿಕೆ ಕೂಡ ನೀಡಿದ್ದಾರೆ. ಇದರ ಬೆನ್ನಲ್ಲೇ, ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ದೆಹಲಿಗೆ ತೆರಳಿದ್ದಾರೆ.

ದೆಹಲಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿರುವ ಶಾಸಕ ಎಂ.ಪಿ ರೇಣುಕಾಚಾರ್ಯ, ನನ್ನ ವಿರುದ್ಧ ಸಿಡಿ ಮಾಡಿರುವುದು ಕೇಳಿದ್ರೆ ಆಶ್ಚರ್ಯವಾಗುತ್ತೆ. ಸಿಡಿ ಬಗ್ಗೆ ಮಾಹಿತಿ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ಮಾಡೋರು ಮಾಡಲಿ. ಅವರಿಗೆ ಒಳ್ಳೆಯದಾಗಲಿ ಎಂದು ಹೇಳಿದರು.

ತನ್ನ ಕ್ಷೇತ್ರದ ಕಾರ್ಯ ನಿಮಿತ್ತ ದೆಹಲಿಗೆ ಆಗಮಿಸಿದ್ದೇನೆ. ನನ್ನ ಕ್ಷೇತ್ರದ ಯೋಜನೆ ಸಂಬಂಧ ಆಗಮಿಸಿದ್ದೇನೆ.  ರಾಜಕೀಯ ಚರ್ಚೆಗಾಗಿ ಬಂದಿಲ್ಲ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ತಿಳಿಸಿದರು.

ಇನ್ನು ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಏನನ್ನು ಹೇಳಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

Key words: CD-against –me-MLA -MP Renukacharya.