ಸಿಡಿ ಪ್ರಕರಣ: ಡಿಕೆ ಶಿವಕುಮಾರ್ ರಾಜೀನಾಮೆಗೆ ಲಖನ್ ಜಾರಕಿಹೊಳಿ ಆಗ್ರಹ…

ಬೆಳಗಾವಿ,ಏ,1,2021(www.justkannada.in):  ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ದ ಆರೋಪಿಸಿರುವ ಹಿನ್ನೆಲೆ ಡಿ.ಕೆ ಶಿವಕುಮಾರ್ ರಾಜೀನಾಮೆಗೆ ಕಾಂಗ್ರೆಸ್ ಮುಖಂಡ ಲಖನ್ ಜಾರಕಿಹೊಳಿ ಆಗ್ರಹಿಸಿದ್ದಾರೆ.Illegally,Sand,carrying,Truck,Seized,arrest,driver

ಈ ಕುರಿತು ಗೋಕಾಕ್ ನಲ್ಲಿ ಮಾತನಾಡಿರುವ ಲಖನ್ ಜಾರಕಿಹೊಳಿ, ಯುವತಿಯ ತಂದೆ ತಾಯಿ ಮಾಡಿರುವ ಆರೋಪ ಸರಿ ಅನ್ನಿಸುತ್ತದೆ. ಇದರ ಹಿಂದೆ ಯಾರಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಯುವತಿ ತಂದೆ ತಾಯಿ ಆರೋಪಿಸಿದಾಗಲೇ ಡಿ.ಕೆ ಶಿವಕುಮಾರ್ ರಾಜೀನಾಮೆ ಕೊಡಬೇಕು. ಈಗ ನೈತಿಕ ಹೊಣೆ ಹೊತ್ತು ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಲಿ ಎಂದು ಆಗ್ರಹಿಸಿದ್ದಾರೆ.cd-case-lakhan-jarakiholli-resigns-dk-sivakumar

ಅಲ್ಲದೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು ಎಂದು ಲಖನ್ ಜಾರಕಿಹೊಳಿ ಹೇಳಿದರು.

Key words: CD case- Lakhan jarakiHolli- resigns – DK Sivakumar

..