ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುತ್ತೇವೆ: ತಾಕತ್ತಿದ್ದರೆ ತಡೆಯಿರಿ- ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲು.

ಹುಬ್ಬಳ್ಳಿ, ಆಗಸ್ಟ್,30,2021(www.justkannada.in):  ಸಾರ್ವಜನಿವಾಗಿ  ಗಣೇಶೋತ್ಸವ ಆಚರಣೆಗೆ ಅನುಮತಿ ಕೊಡದಿದ್ದರೂ ಆಚರಣೆ ಮಾಡುತ್ತೇವೆ ತಾಕತ್ತಿದ್ದರೇ ತಡೆಯಲಿ ಎಂದು ಸರ್ಕಾರಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲು ಹಾಕಿದರು.

ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಶ್ರೀರಾಮ ಸೇನಾ ಕಾರ್ಯಕರ್ತರು ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ ನಿವಾಸದ ಎದುರು ಪ್ರತಿಭಟನೆ ನಡೆಸಿದರು.

ಮಾಧ್ಯಮಗಳ ಜತೆ  ಮಾತನಾಡಿದ ಪ್ರಮೋದ್ ಮುತಾಲಿಕ್, ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಮಾಡುತ್ತೇವೆ. ಸರ್ಕಾರ ಅನುಮತಿ ನೀಡದಿದ್ದರೂ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುತ್ತೇವೆ ಎಂದು ಹೇಳಿದರು.

Key words: Celebrate -Ganeshotsav – public-Pramod Muthalik -challenge – government.